ಸುಳ್ಯ: ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಉತ್ಸವದಲ್ಲಿ ಶ್ರೀ
ಶಾರದಾಂಬಾ ಕಲಾ ವೇದಿಕೆಯಲ್ಲಿ.14ರಂದು ಮಣಿಕಂಠ ಮಹಿಮೆ ನಾಟಕ ಪ್ರದರ್ಶನಗೊಂಡಿತು.ಶಿವದೂತೆ ಗುಳಿಗ ಖ್ಯಾತಿಯ ಕಲಾ ಸಂಗಮದ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲಬೈಲ್ ನಿರ್ದೇಶನದಲ್ಲಿ ಭಕ್ತಿ ಪ್ರಧಾನ ನಾಟಕ ‘ಮಣಿಕಂಠ ಮಹಿಮೆ’ ನೋಡುಗರ ಮನಸೂರೆಗೊಂಡಿತು.
ನಾಟಕದ ನಿರ್ದೇಶಕ ವಿಜಯಕುಮಾರ್ ಕೊಡಿಯಾಲಬೈಲ್ ಅವರನ್ನು ಶಾರದಾಂಬ, ದಸರಾ ಸಮೂಹ ಸಮಿತಿಗಳ ಪರವಾಗಿ ಸನ್ಮಾನಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ,
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ,ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ. ಡಿ.ವಿ. ಲೀಲಾಧರ್, ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್ದಾಸ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ನ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್. ಸನ್ಮಾನ ನೆರವೇರಿಸಿದರು.