ಸುಳ್ಯ:ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ಸ್ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸುಳ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಮಣಿಕಂಠನ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಜಿಲ್ಲಾ ಪಂಚಾಯತ್
ಉಪವಿಭಾಗದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಮೃತಭವನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್ ಸಂಶುದ್ದಿನ್, ಜಿಲ್ಲಾ ಪಂಚಾಯತ್ ಉಪ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಫಯಾಝ್ ಅಹಮ್ಮದ್, ಗೋಕುಲ್ ದಾಸ್, ಅಶೋಕ್ ಪ್ರಭು, ಭವಾನಿಶಂಕರ್ ಕಲ್ಮಡ್ಕ, ಇಂಜಿನಿಯರ್ ಕೃಷ್ಣ ರಾವ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು
















