ಸುಳ್ಯ: ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ಮಾ. 8ರಂದು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸುಳ್ಯದ ಲಯನ್ಸ್ ಸಭಾಭವನದಲ್ಲಿ ನಡೆಯಲಿದೆ.ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ.ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ
ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶೈಲಜಾ ಬಿ, ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ.ಶಾಲಿನಿ ವಿ.ಎಲ್, ದ.ಕ. ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಮಾಜಿ ಅಧ್ಯಕ್ಷೆ ಹರಿಣಿ ಸದಾಶಿವ, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಾಜಿ ಅಧ್ಯಕ್ಷೆ ಹಾಗೂ ಜಿಲ್ಲಾ ಒಕ್ಕೂಟದ ಜತೆ ಕಾರ್ಯದರ್ಶಿ ಮಧುಮತಿ ಬೊಳ್ಳೂರು ಅತಿಥಿಗಳಾಗಿ ಭಾಗವಹಿಸಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಹಿಳೆಯರಿಗೆ ವೈಯಕ್ತಿಕ ಮನರಂಜನಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕು ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ತಿಳಿಸಿದ್ದಾರೆ.








