ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಅ.8 ರಂದು ನಡೆಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಕಾರ್ಡ್ ವಿತರಿಸಿ ಮಾತನಾಡಿ ಕಳೆದ ಎರಡು ಅವಧಿಯಲ್ಲಿ
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪತ್ರಕರ್ತರ ಕ್ಷೇಮಕ್ಕಾಗಿ ಹತ್ತಾರು ಯೋಜನೆಗಳನ್ನು ರೂಪಿಸಲಾಗಿದೆ. ಸಂಘದ ನೇತೃತ್ವದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿತ್ತು. ಈ ಗ್ರಾಮ ವಾಸ್ತವ್ಯ ಮಾಡಿದ ಗ್ರಾಮಗಳಲ್ಲಿ ಉಂಟಾದ ಬದಲಾವಣೆಗಳ ಕುರಿತು ದಾಖಲೀಕರಣ ಮಾಡುವ ಉದ್ದೇಶದಿಂದ ಪುಸ್ತಕವನ್ನು ಹೊರ ತರುವ ಯೋಚನೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಸಂಘದ ವತಿಯಿಂದ ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಅವರನ್ನು ಸನ್ಮಾನಿಸಲಾಯಿತು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ತಾಲೂಕು ಸಂಘದ ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ, ಉಪಾಧ್ಯಕ್ಷೆ ಪೂಜಾಶ್ರೀ ವಿತೇಶ್ ಕೋಡಿ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ, ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕೆಎಂಸಿ ಆಸ್ಪತ್ರೆಯ ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ದಯಾನಂದ ಕಲ್ನಾರ್ ಸ್ವಾಗತಿಸಿ, ಮಿಥುನ್ ಕರ್ಲಪ್ಪಾಡಿ ವಂದಿಸಿದರು.















