ನವದೆಹಲಿ: ಮಣಿಪುರದಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಮ್ಮ ಸಿಎಂ ಹುದ್ದೆಗೆ ಫೆಬ್ರವರಿ 9ರಂದು ರಾಜೀನಾಮೆ ನೀಡಿದ್ದರು. ಇಂದಿನಿಂದ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಹೇರಿದೆ.ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು. ಮಣಿಪುರದಲ್ಲಿ 21 ತಿಂಗಳಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ.ಮುಂದಿನ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಬಿಜೆಪಿ ಹೈಕಮಾಂಡ್ ಮಾತುಕತೆ ನಡೆಸುತ್ತಿದೆ. ಆದರೆ ಇನ್ನೂ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ.









