ಸುಳ್ಯ: ಏ.30 ರಂದು ಭಾನುವಾರ ಪ್ರಸಾರವಾದ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮದ 100 ನೇ ಸಂಚಿಕೆಯಲ್ಲಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ಅವರು ಭಾಗವಹಿಸಿದ್ದಾರೆ. ಎಲ್ಲಾ ಆಕಾಶವಾಣಿ ಕೇಂದ್ರಗಳಿಂದ ಹಾಗೂ ದೂರದರ್ಶನಗಳಲ್ಲಿ ಪ್ರಸಾರವಾದ ಮನ್ ಕಿ ಬಾತ್ ಕಾರ್ಯಕ್ರಮದ ಶ್ರೋತೃ ಆಗಿ ಭಾಗವಹಿಸಲು ವಿವಿಧ ಕ್ಷೇತ್ರಗಳ ಗಣ್ಯರನ್ನು
ಆಹ್ವಾನಿಸಲಾಗಿತ್ತು. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗಿದ್ದು ಡಾ.ದಾಮ್ಲೆ ಆವರಿಗೂ ಆಹ್ವಾನ ಬಂದಿತ್ತು. ಈ ಹಿನ್ನಲೆಯಲ್ಲಿ ದಾಮ್ಲೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಸ್ವಾತಂತ್ರದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಡಾ.ದಾಮ್ಲೆ ಅವರು 75 ಮಂದಿ ಅಪ್ರಕಟಿತ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಪುಸ್ತಕ ರಚಿಸಿದ್ದರು ಮತ್ತು ಈ ಶಾಲೆಯಲ್ಲಿ ಕಾರ್ಯಕ್ರಮ ರೂಪಿಸಿದ್ದರು. ಈ ಪುಸ್ತಕ ಹಾಗೂ ಕಾರ್ಯಕ್ರಮದ ಅವರು ಪ್ರಧಾನಿ ಕಾರ್ಯಾಲಯಕ್ಕೂ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಶ್ರೋತೃಗಳಾಗಿ ಡಾ.ದಾಮ್ಲೆ ಅವರನ್ನು ಆಹ್ವಾನಿಸಲಾಗಿದೆ ಎಂದು ಹೇಳಲಾಗಿದೆ