ನವದೆಹಲಿ: ಕೇರಳಂಗೆ ಗುರುವಾರ ನೈರುತ್ಯ ಮುಂಗಾರು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಕೇರಳಂನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತಿದೆ.ವಾಡಿಕೆಗಿಂತಲೂ
ಮೂರು ದಿನ ತಡವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ. ಜೂನ್ ಒಂದರಂದು ಸಾಮಾನ್ಯವಾಗಿ ಮುಂಗಾರು ಪ್ರವೇಶವಾಗುತ್ತಿತ್ತು. ಈ ಬಾರಿ
ಮೇ 26ರಂದೇ ಕೇರಳಂನಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಮುನ್ಸೂಚನೆ ನೀಡಿತ್ತಾದರೂ ಜೂ.4ರಂದು ಪ್ರವೇಶಿಸಿದೆ.
ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ. ಈ ವರ್ಷ ಭಾರತದಲ್ಲಿ ಸುರಿಯುವ ಮಳೆಯು ದೀರ್ಘಾವಧಿ ಸರಾಸರಿಯ ಶೇಕಡ 90ರಷ್ಟಿರಬಹುದು ಎಂದು ಐಎಂಡಿ ಹೇಳಿದೆ.
ಸಾಮಾನ್ಯವಾಗಿ ನೈರುತ್ಯ ಮುಂಗಾರು ಜೂನ್ 1ರಂದು ಕೇರಳಂ ಪ್ರವೇಶಿಸುತ್ತದೆ. ಜುಲೈ 8ರ ಒಳಗಾಗಿ ಇಡೀ ದೇಶವನ್ನು ಆವರಿಸಿಕೊಳ್ಳುತ್ತದೆ. ಸೆಪ್ಟೆಂಬರ್ 17ರ ಸುಮಾರಿಗೆ ವಾಯವ್ಯ ಭಾರತದಿಂದ ಸ್ಥಳಾಂತರಗೊಂಡು, ಅಕ್ಟೋಬರ್ 15ರ ಹೊತ್ತಿಗೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ.













