*ಪಿ.ಜಿ.ಎಸ್.ಎನ್.ಪ್ರಸಾದ್.
ನೈರುತ್ಯ ಮುಂಗಾರು ಮಾರುತ ಮುಂದಿನ 48 ಗಂಟೆಗಳಲ್ಲಿ ಕೇರಳದ ಮೂಲಕ ಭಾರತೀಯ ಉಪಖಂಡ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಅದರೊಂದಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು, ಚಂಡಮಾರುತವಾಗಿ ರೂಪುಗೊಳ್ಳುವ ಎಲ್ಲಾ ಲಕ್ಷಣಗಳು
ಗೋಚರಿಸುತ್ತಿದೆ. ಈ ಚಂಡಮಾರುತದ ಚಲನೆಯನ್ನು ಹೊಂದಿಕೊಂಡಿದೆ ಮುಂಗಾರು ಮಾರುತದ ಭವಿಷ್ಯ. ಈಗಿನ ಪ್ರಕಾರ ಮಳೆಗಾಲದ ಆರಂಭ ದುರ್ಬಲ ಎನ್ನಲಾಗಿದೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಬಹುದು.
ಹವಾಮಾನದಲ್ಲಿ ಭಾರೀ ವೈಪರಿತ್ಯಗಳು ಉಂಟಾದರೆ ಮತ್ತೆ ಕೆಲವು ದಿನಗಳ ಮುಂಗಾರು ವಿಳಂಬ ಆಗಲುಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರತಿಭಾರಿಯೂ ವಾಡಿಕೆಯಂತೆ ನೈಋತ್ಯ ಮುಂಗಾರು ಮಾರುತುಗಳು ಜೂನ್ 1ರಿಂದ ಕೇರಳ ಪ್ರವೇಶ ಮಾಡುತ್ತಿತ್ತು. ಈ ಮೂಲಕ ಕೆಲವು ದಿನಗಳಲ್ಲಿ ಕರ್ನಾಟಕವನ್ನೂ ಕೂಡ ಪ್ರವೇಶ ಮಾಡುತ್ತಿತ್ತು. ಆದರೆ ಈ ಬಾರಿ ನಾಲ್ಕು ದಿನ ವಿಳಂಬ ಎನ್ನುವ ಮಾಹಿತಿ ಇಲಾಖೆ ನೀಡಿತ್ತು.
ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ:
ರಾಜ್ಯದ ವಿವಿಧೆಡೆ ಜೂನ್ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿರಲಿದೆ ಎಂದು ಸೂಚನೆ ನೀಡಿದೆ.