ಪ್ಯಾರೀಸ್: ಪ್ಯಾರಿಸ್ ಒಲಿಂಪಿಕ್ಸ್ನ ಶೂಟಿಂಗ್ ಸ್ಪರ್ಧೆಯಲ್ಲಿ ಮನು ಭಾಕರ್ 4ನೇ ಸ್ಥಾನ ಪಡೆದಿದ್ದಾರೆ. ಭಾರತಕ್ಕೆ ನಿರೀಕ್ಷೆಯಲ್ಲಿದ್ದ ಮೂರನೇ ಪದಕ ಜಸ್ಟ್ ಮಿಸ್ ಆಗಿದೆ.ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್ ಸುತ್ತಿನಲ್ಲಿ
4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದರೊಂದಿಗೆ ಮೂರನೇ ಪದಕ ಗೆಲ್ಲುವ ಅವರ ಕನಸು ಕಮರಿದೆ. ಫೈನಲ್ನಲ್ಲಿ ಮನು ಭಾಕರ್ 28 ಅಂಕಗಳೊಂದಿಗೆ 4ನೇ ಸ್ಥಾನ ಪಡೆದರೆ, ಕಂಚಿನ ಪದಕ ಗೆದ್ದ ಹಂಗೇರಿಯಾದ ಮೇಜರ್ ವೆರೋನಿಕಾ 31 ಪಾಯಿಂಟ್ಸ್ ಕಲೆಹಾಕಿದ್ದರು. ಅಂದರೆ ಕೇವಲ ಮೂರು ಅಂಕಗಳ ಅಂತರದಿಂದ ಮೂರನೇ ಪದಕ ಗೆಲ್ಲುವ ಅವಕಾಶವನ್ನು ಮನು ಭಾಕರ್ ಅವರಿಗೆ ನಷ್ಟವಾಯಿತು.