ಮಂಡೆಕೋಲು:ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಮುಂದಿನ ತಿಂಗಳು ನಡೆಯಲಿರುವ 73ನೇ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆ ಅ.25ರಂದು ನಡೆಯಿತು. ಆರೋಗ್ಯಕರ ಜೀವನಕ್ಕೆ ಮ್ಯಾರಥಾನ್ ಒಂದು ಹೆಜ್ಜೆ
ಎಂಬ ಧ್ಯೇಯದೊಂದಿಗೆ
ಮಂಡೆಕೋಲು ಗ್ರಾಮ ಮಟ್ಟದಲ್ಲಿ ಮ್ಯಾರಥಾನ್ ಏರ್ಪಡಿಸಲಾಗಿತ್ತು.18 ವರ್ಷಕ್ಕಿಂತ ಕೆಳಗಿನವರು,18 ರಿಂದ 40 ವರ್ಷ ಒಳಗಿನವರು, 40 ವರ್ಷಕ್ಕಿಂತ ಮೇಲ್ಪಟ್ಟವರು ಎಂಬಂತೆ ಮೂರು ವಿಭಾಗಗಳಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಮ್ಯಾರಥಾನ್ ಓಟಗಾರ ವಿನಯ ನಾರಾಲು ಮ್ಯಾರಥಾನ್ಗೆ ಚಾಲನೆ ನೀಡಿದರು.
ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಮ್ ಅಡ್ಪಂಗಾಯ,ಮಂಡೆಕೋಲು ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಉಪಾಧ್ಯಕ್ಷ ಪುರುಷೋತ್ತಮ ಕಾಡುಸೊರಂಜ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್, ಮಾಜಿ ಅಧ್ಯಕ್ಷರಾದ ರಾಮಕೃಷ್ಣ ರೈ, ಶಿವಪ್ರಸಾದ್ ಉಗ್ರಾಣಿಮನೆ, ಸಂಘದ ನಿರ್ದೇಶಕರುಗಳು, ಪ್ರಮುಖರಾದ ಬಾಲಚಂದ್ರ ದೇವರಗುಂಡ, ತುಳಸಿನಿ ಮತ್ತಿತರರು ಉಪಸ್ಥಿತರಿದ್ದರು.










