ಸುಳ್ಯ: ಸುಳ್ಯ ತಾಲೂಕಿನ ಮರ್ಕಂಜ ಬಿಜೆಪಿ ಶಕ್ತಿಕೇಂದ್ರ ದ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿದ್ದರು. ಶಾಸಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಮರ್ಕಂಜ ಶಕ್ತಿಕೇಂದ್ರದ ವತಿಯಿಂದ
ವಿಧಾನಸಭಾ ಚುನಾವಣೆಯ ಸಮಯದಲ್ಲಿ ದುಡಿದ ಕಾರ್ಯಕರ್ತರಿಗೆ ಶಾಸಕರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಅಳವುಪಾರೆ
ಬಿಜೆಪಿ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಮಹಾಶಕ್ತಿಕೇಂದ್ರ, ಶಕ್ತಿ ಪ್ರಮುಖರು, ಚುನಾಯಿತ ಜನಪ್ರತಿನಿದಿಗಳು, ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.