ಬೆಂಗಳೂರು: ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಅವರು ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಎಲಿಮಲೆ- ಅರಂತೋಡು ರಸ್ತೆ ಸೇರಿ ಸುಳ್ಯ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಯಿತು. ಮರ್ಕಂಜ,ದೊಡ್ಡತೋಟ, ಎಲಿಮಲೆ, ಆರಂತೋಡು ಸಂಪರ್ಕಿಸುವ
ಲೋಕೋಪಯೋಗಿ ಇಲಾಖೆ ರಸ್ತೆಯ ಅಗಲೀಕರಣ ಹಾಗೂ ಅಭಿವೃದ್ಧಿಗೆ ಮಾಜಿ ಸಚಿವ ಎಸ್. ಅಂಗಾರ ಅವರ ಅವಧಿಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯ ಪ್ರಕಾರ ಅರಂತೋಡಿನಿಂದ ಪಿಂಡಿಮನೆ ಎಂಬಲ್ಲಿಯವರೆಗೆ ಕಳೆದ ಶಾಸಕರ ಅವಧಿಯಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗಿತ್ತು. ರಸ್ತೆಯ ಉಳಿದ ಭಾಗದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು. ಹಾಗೂ ತಾಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಚಿವರು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸುಳ್ಯದ ಅಟಲ್ ಜೀ ಸೆವಾ ಟ್ರಸ್ಟ್ನ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ಮತ್ತಿತರು ಉಪಸ್ಥಿತರಿದ್ದರು