ಸುಳ್ಯ:ಸುಳ್ಯ ಜಯನಗರ ಜನ್ನತ್ತುಲ್ ಉಲೂಂ ಮಸೀದಿ ಮತ್ತು ಮದರಸ ಕಟ್ಟಡ ನವೀಕರಣಕ್ಕಾಗಿ ವಕ್ಫ್ ಬೋರ್ಡಿನಿಂದ 7 ಲಕ್ಷ ರೂ. ಅನುದಾನ ಮಂಜೂರುಗೊಂಡಿದೆ. ಮಾಜಿ ನ.ಪಂ.ಅಧ್ಯಕ್ಷರು ಹಾಗೂ ಕರ್ನಾಟಕ ವಕ್ಸ್ ಕೌನ್ಸಿಲ್ ಮಾಜಿ ಸದಸ್ಯರಾದ ಎಸ್. ಸಂಶುದ್ದೀನ್ ಅವರ ಮನವಿ ಮೇರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಕ್ಸ್ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯು.ಟಿ. ಖಾದರ್ ಅನುದಾನ ಮಂಜೂರು ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.















