ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ಸುಳ್ಯ ವಿಧಾನಸಭಾ ಕ್ಷೆತ್ರದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ನ.12ರಂದು ಯುವಜನ ಸಂಯುಕ್ತ ಮಂಡಳಿಯ ಜೆ.ಓ.ಸಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾಟವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ

ಹಾರೈಸಿದರು.”ವೃತ್ತಿಯಲ್ಲಿ ನಿಷ್ಠೆ ಮತ್ತು ವೃತ್ತಿಯಲ್ಲಿ ಎದುರಾಗುವ ಸವಾಲನ್ನು ಎದುರಿಸುವ ಛಲ ಇದ್ದರೆ ವೃತ್ತಿ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಅವರು ಹೇಳಿದರು. ವೃತ್ತಿಯಲ್ಲಿನ ಸೇವಾ ಮನೋಭಾವ ಮತ್ತು ನಿಷ್ಠೆಯಿಂದ ಜನರ ಪ್ರೀತಿ ಗಳಿಸಲು ಸಾಧ್ಯ ಎಂದು ಸಚಿವರು ಹೇಳಿದರು. ಧ್ವನಿ, ಬೆಳಕು ಮತ್ತು ಶಾಮಿಯಾನ ಸಂಘದವರು ಮುಂದಿರಿಸಿದ ಬೇಡಿಕೆಗಳನ್ನು ಪರಿಗಣಿಸಲಾಗುವುದು ಎಂದು ಅವರು ಹೇಳಿದರು. ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ತಹಶೀಲ್ದಾರ್ ಅನಿತಾ ಲಕ್ಷ್ಮಿ, ಶಾಮಿಯಾನ ಮಾಲಕರ ಸಂಘದ ಜಿಲ್ಲಾಧ್ಯಕ್ಷ ಬಾಬು ವಿಟ್ಲ, ಧ್ವನಿ ಮತ್ತು ಬೆಳಕು ಮಾಲಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ ಶೆಟ್ಟಿ,ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ, ಕಿಶೋರಿ ಶೇಟ್, ಕೆ.ವಿ.ಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್. ಡಿ.ವಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ನ.ಪಂ.ಮಾಜಿ ಸದಸ್ಯ ಕೆ.ಎಂ.ಮುಸ್ತಫ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಕೆ.ಮಾಧವ, ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಎಂ.ಬಿ.ಸದಾಶಿವ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಕೆ.ಟಿ.ವಿಶ್ವನಾಥ್, ಧ್ವನಿ, ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಕಾನೂನು ಸಲಹೆಗಾರ ಮಹೇಶ್ ಭಟ್, ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ರೈ ಉಬರಡ್ಕ,ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ತಾಲೂಕು ಅಧ್ಯಕ್ಷ ಗಿರಿಧರ ಸ್ಕಂದ, ಗೌರವಾಧ್ಯಕ್ಷ ಎಸ್.ಪಿ.ಲೋಕನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ, ಬೆಳ್ಳಾರೆಯ ಧ್ವನಿ ಬೆಳಕು ಮತ್ತು ಶಾಮಿಯಾನದ ಮಾಲಕ ಕೆದಿಲ ನರಸಿಂಹ ಭಟ್,ಸಂಘದ ಗೌರವಾಧ್ಯಕ್ಷ ಎಸ್.ಪಿ.ಲೋಕನಾಥ್, ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿ ಸಾನ್ವಿ, ಜೀವನ್ ರಾಂ ಸುಳ್ಯ ಅವರನ್ನು ಸನ್ಮಾನಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಖಜಾಂಜಿ ಮಧುಸೂಧನ್ ನಾಯರ್, ಜತೆ ಕಾರ್ಯದರ್ಶಿ ಶಿವಪ್ರಕಾಶ್, ಪದಾಧಿಕಾರಿಗಳಾದ ಗುರುದತ್ ನಾಯಕ್, ಶಾಫಿ ಪೈಚಾರ್, ಸತ್ಯಪ್ರಕಾಶ್, ಜಿ.ಶ್ರೀಧರ್ ಜಯನಗರ, ಜಿ.ಎ.ಮಹಮ್ಮದ್, ಸತೀಶ್ ಕಲ್ಲುಗುಂಡಿ, ಜಯಂತ್ ಮಂಡೆಕೋಲು ಮೊದಲಾದವರು ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿ ಗುರುದತ್ ನಾಯಕ್ ಸ್ವಾಗತಿಸಿದರು.ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ತಾಲೂಕು ಅಧ್ಯಕ್ಷ ಗಿರಿಧರ ಸ್ಕಂದ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನೆಗೆ ಮುನ್ನ ಕ್ರೀಡಾಪಟುಗಳ ಆಕರ್ಷಕ ಪಥಸಂಚಲನ, ಸುಡುಮದ್ದು ಪ್ರದರ್ಶನ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.
6 ತಂಡಗಳು:ಅರಂತೋಡು ಬುಲ್ಸ್ ಸುಳ್ಯ ಟೈಗರ್ಸ್, ಮಧುರಾಜ್ ಉಬರಡ್ಕ, ಕುಕ್ಕೆ ಶ್ರೀ ವಾರಿಯರ್ಸ್, ಕಲ್ಲುಗುಂಡಿ ಬ್ರದರ್ಸ್, ಮೈತ್ರಿ ಬೆಳ್ಳಾರೆ ತಂಡಗಳು ಭಾಗವಹಿಸುತಿದೆ. ಲೀಗ್, ಪ್ಲೇ ಆಫ್ ಮಾದರಿಯಲ್ಲಿ ಪಂದ್ಯಾಟ ನಡೆಯುತಿದೆ.