ಸುಳ್ಯ: ವಿಧಾನಸಭೆಯ ಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಅರಂಭಗೊಂಡಿತು. ಯಂತ್ರಗಳ ಬದಲಾವಣೆ ಮತ್ತಿತರ ಕಾರಣಗಳಿಂದ ಕೆಲವು ಬೂತ್ಗಳಲ್ಲಿ 10-15 ನಿಮಿಷ ಮತದಾನ ತಡವಾಗಿ ಆರಂಭಗೊಂಡಿದೆ. ಸುಳ್ಯ ವಿಧಾನಸಭಟ ಕ್ಷೇತ್ತದ 231 ಬೂತ್ಗಳಲ್ಲಿ ಚುನಾವಣೆ ಸುಸೂತ್ರವಾಗಿ ನಡೆಯುತಿದೆ ಎಂದು ಸುಳ್ಯ ವಿಧಾನಸಭಾ
ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಜಿ.ಮಂಜುನಾಥ್ ತಿಳಿಸಿದ್ದಾರೆ.ಬೆಳಗ್ಗೆಯೇ ಕೆಲವು ಮತಗಟ್ಟೆಗಳ ಮುಂದೆ ಮತದಾರರು ಸಾಲುಗಟ್ಟಿರುವುದು ಕಂಡು ಬಂತು. ಮತದಾನವು ಸುಸೂತ್ರವಾಗಿ ನಡೆಯಲು ಎಲ್ಲಾ ವ್ಯವಸ್ಥೆಗಳನ್ನೂ ಮಾಡಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ 231 ಬೂತ್ಗಳಲ್ಲಿ ಮತದಾನ
ನಡೆಯುತ್ತಿದ್ದು 2,06,029 ಮತದಾರರು 8 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ. ದ.ಕ.ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರದಲ್ಲಿ
17,81,389 ಮಂದಿ 60 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ 1,860 ಮತಗಟ್ಟೆಗಳನ್ನು ತೆರೆಯಲಾಗಿದೆ. ಅದರಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 1,184 ಮತ್ತು ನಗರ, ಪಟ್ಟಣ ಪ್ರದೇಶದಲ್ಲಿ 676 ಮತಗಟ್ಟೆ ಕೇಂದ್ರಗಳು ಸೇರಿವೆ.
ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ 939 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಸಂಜೆ 6ರವರೆಗೆ ಮತದಾನಕ್ಕೆ ಅವಕಾಶವಿದೆ. ಬಿಗಿ ಭದ್ರತೆಯನ್ನೂ ಏರ್ಪಡಿಸಲಾಗಿದೆ.