ಬೆಂಗಳೂರು: ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆ ಮತ್ತು ಫ್ರೀಡಂ ಆ್ಯಫ್ ಇದರ ಸಹಯೋಗದಲ್ಲಿ ನಡೆದ ಒಳನಾಡು ಮೀನು ಉತ್ಪಾದಕರ ಸಮಾವೇಶ – ೨೦೨೨ ಮತ್ಸ್ಯದರ್ಶಿನಿ ಕಾರ್ಯಕ್ರಮದಲ್ಲಿ
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಾಗು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿಗ ಡಾ. ರೇಣುಕಾ ಪ್ರಸಾದ್ ಕೆ.ವಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಖಾತೆ ಸಚಿವರಾದ ಎಸ್. ಅಂಗಾರ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ ತೀರ್ಥರಾಮ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಇದರ ನಿರ್ದೇಶಕರಾದ ಡಾ. ಜ್ಯೋತಿ ಆರ್ ಪ್ರಸಾದ್, ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಊರುಬೈಲು, ಸುಳ್ಯ ಬಿ.ಜೆ.ಪಿ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ ಮತ್ತು ಗಣೇಶ್ ಇಂಡಸ್ಟ್ರೀಸ್ ಮಾಲಕರಾದ ಜಗದೀಶ್ ಸರಳಿಕುಂಜ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.