ಸುಳ್ಯ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ’ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ’ – ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮ ಮಾ. 26 ರಂದು ಸಂಜೆ 5 ಗಂಟೆಗೆ ಸುಳ್ಯದ ಯುವಜನ
ಸಂಯುಕ್ತ ಮಂಡಳಿಯ ಮೈದಾನದಲ್ಲಿ ನಡೆಯಲಿದೆ.
ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಹಾಗೂ ಮಾಹಿತಿ ಪ್ರಸಾರ ರಾಜ್ಯ ಸಚಿವ ಡಾ. ಎಲ್. ಮುರುಗನ್ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸುವರು.ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿರುವರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.