ಮಂಗಳೂರು:ಪಿಲಿಕುಳದ ವಿಶಾಲ ಕೆರೆಯಲ್ಲಿ ಬೆಳಸಿದ ಕಾಟ್ಲಾ, ರೋಹು, ಗೌರಿ, ತಿಲೇಪಿಯಾ ಮೊದಲಾದ ಮೀನುಗಳನ್ನು ಹಿಡಿದು ಮಾರಾಟ ಮಾಡುವ ಮತ್ಸ್ಯೋತ್ಸವ ಮತ್ತು ಮೀನು ಆಹಾರ ಮೇಳ ಕಾರ್ಯಕ್ರಮವನ್ನು ನಡೆಸಲಾಯಿತು.ಮೇಳದಲ್ಲಿ ಸಾರ್ವಜನಿಕರು ವಿವಿಧ ಮೀನಿನ ಖಾದ್ಯಗಳನ್ನು ಸವಿದು ಆನಂದಿಸಿದರು. ಅಂದಾಜು
2,000 ಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವನ್ನು ಮೂಲ್ಕಿ–ಮೂಡಬಿದ್ರಿ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಮೀನುಗಳನ್ನು ಕೆರೆಗೆ ಬಿಡುವ ಮೂಲಕ ಉದ್ಘಾಟಿಸಿದರು. ಪ್ರಾಧಿಕಾರ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಶಿವರಾಮ ಮಲ್ಲಿ ಮತ್ತು

ಎನ್.ಜಿ.ಮೋಹನ್, ಪ್ರಾಧಿಕಾರದ ಉಪಸಮಿತಿ ಅಧ್ಯಕ್ಷರಾದ ಜಿ. ಶ್ರೀನಿಕೇತನ್, ಮತ್ತು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಜನರಲ್ ಮೇನೇಜರ್ ಮಹೇಶ್ ಕುಮಾರ್ ಅವರು ಅತಿಥಿಗಳಾಗಿ ಭಾಗವಹಿಸಿದರು.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಅರುಣ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಡಾ. ಅಶೋಕ್ ಕೆ.ಆರ್.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.









