ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ಸುಳ್ಯ ವಿಧಾನಸಭಾ ಕ್ಷೆತ್ರದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಸಮಾರಂಭ ನ. 12 ರಂದು ಶನಿವಾರ ಯುವಜನ ಸಂಯುಕ್ತ ಮಂಡಳಿಯ ಜೆ.ಓ.ಸಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಾಟಕ್ಕೆ ಭರ್ಜರಿ ಸಿದ್ಧತೆ ಮಾಡಲಾಗಿದೆ. ಅಲ್ಲಲ್ಲಿ ಮಹಾ ದ್ವಾರಗಳು, ಪ್ಲೆಕ್ಸ್‌ಗಳನ್ನು ಅಳವಡಿಸಲಾಗಿದ್ದು ಕ್ರೀಡಾ ಪ್ರೇಮಿಗಳಿಗೆ ಸ್ವಾಗತ ಕೋರುತಿದೆ. ಇಂದು ಸಂಜೆ 6 ಗಂಟೆಯಿಂದ ಪಂದ್ಯಾಟಗಳು
ಆರಂಭವಾಗಲಿದೆ. ಸಂಜೆ 5ಕ್ಕೆ ಕ್ರೀಡಾಪಟುಗಳ ಆಕರ್ಷಕ ಪಥಸಂಚಲನ, ಸುಡುಮದ್ದು ಪ್ರದರ್ಶನ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಪಂದ್ಯಾಟವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಳ್ಯ ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಶಾಮಿಯಾನ ಮಾಲಕರ ಸಂಘದ ಜಿಲ್ಲಾಧ್ಯಕ್ಷ ಬಾಬು ವಿಟ್ಲ, ನ.ಪಂ.ಸದಸ್ಯ ಎಂ. ವೆಂಕಪ್ಪ ಗೌಡ, ತಹಸೀಲ್ದಾರ್ ಅನಿತಾಲಕ್ಷ್ಮಿ, ನ.ಪಂ. ಸದಸ್ಯೆ ಕಿಶೋರಿ ಶೇಟ್, ಕೆ.ವಿ.ಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್. ಡಿ.ವಿ, ಧ್ವನಿ ಮತ್ತು ಬೆಳಕು ಮಾಲಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್ ಶೆಟ್ಟಿ, ನ.ಪಂ. ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ತಾಲೂಕು ಅಧ್ಯಕ್ಷ ಬಿ.ಕೆ.ಮಾಧವ, ಲಯನ್ಸ್ ಜಿಲ್ಲಾ ಗವರ್ನರ್ ಎಂ.ಬಿ.ಸದಾಶಿವ, ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್,

ತಾಲೂಕು ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ್ ರೈ, ನ.ಪಂ. ಮಾಜಿ ಸದಸ್ಯ ಕೆ.ಎಂ.ಮುಸ್ತಫ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಕೆ.ಟಿ.ವಿಶ್ವನಾಥ್, ಮೆಸ್ಕಾಂ ಇಲಾಖೆಯ ಎಇಇ ಹರೀಶ್ ನಾಯ್ಕ್, ಧ್ವನಿ, ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಕಾನೂನು ಸಲಹೆಗಾರ ಮಹೇಶ್ ಭಟ್ ಭಾಗವಹಿಸಿಲಿದ್ದಾರೆ.
ಇದೇ ಸಂದರ್ಭದಲ್ಲಿ ಬೆಳ್ಳಾರೆಯ ಧ್ವನಿ ಬೆಳಕು ಮತ್ತು ಶಾಮಿಯಾನದ ಮಾಲಕ ಕೆದಿಲ ನರಸಿಂಹ ಭಟ್, ರಂಗನಿರ್ದೇಶಕ ಜೀವನ್ ರಾಂ ಸುಳ್ಯ, ಸಂಘದ ಗೌರವಾಧ್ಯಕ್ಷ ಎಸ್.ಪಿ.ಲೋಕನಾಥ್, ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ್ತಿ ಸಾನ್ವಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

6 ತಂಡಗಳು:
ಪಂದ್ಯಾಟದಲ್ಲಿ 6 ತಂಡಗಳು ಭಾಗವಹಿಸಲಿದೆ. ಕಲ್ಲುಗುಂಡಿ, ಅರಂತೋಡು, ಎನ್.ಎಂ.ಸಿ, ಕಡಬ, ಬಾಳಿಲ ಮತ್ತು ಉಬರಡ್ಕ ತಂಡಗಳು ಭಾಗವಹಿಸಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ತಾಲೂಕು ಅಧ್ಯಕ್ಷ ಗಿರಿಧರ ಸ್ಕಂದ ವಹಿಸಲಿದ್ದಾರೆ. ಗೌರವಾಧ್ಯಕ್ಷ ಎಸ್.ಪಿ.ಲೋಕನಾಥ್ ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗುರುಪ್ರಕಾಶ್ ಕೆಟರರ್ಸ್‌ನ ಜಿ.ಜಿ.ನಾಯಕ್, ಜನತಾ ಗ್ರೂಪ್ಸ್‌ನ ಕೆ.ಎಂ.ಅಬ್ದುಲ್ ಮಜೀದ್, ಸ್ವಾತಿ ಮೈಕ್ಸ್ ಮಾಲಕ ಜಯಪ್ರಕಾಶ್ ಭಾಗವಹಿಸಲಿದ್ದಾರೆ.