ಸುಳ್ಯ:ಪ್ರೆಸ್ ಕ್ಲಬ್ ಸುಳ್ಯ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು
ಪತ್ರಕರ್ತರ ಸ್ನೇಹ ಕೂಟ ಸುಳ್ಯ ಪ್ರೆಸ್ ಕ್ಲಬ್ ವಠಾರದಲ್ಲಿ ನಡೆಯಿತು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಿದರು.ಮುಖ್ಯ ಅತಿಥಿಯಾಗಿದ್ದ ಸುಳ್ಯ ಆರಕ್ಷಕ ಉಪನಿರೀಕ್ಷಕ ಉದಯರವಿ ವೈ.ಎಂ. ಅವರು ಹಿರಿಯ ಪತ್ರಕರ್ತ ಗಣೇಶ ಅಮಿನಗಡ ರಚಿಸಿದ

‘ಪತ್ರಕರ್ತನ ಅನುಭವಗಳು’ ಪುಸ್ತಕವನ್ನು ಬಿಡುಗಡೆ ಮಾಡಿದರು.ಪ್ರೆಸ್ ಕ್ಲಬ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಅಭಿನಂದನಾ ಭಾಷಣ ಮಾಡಿದರು.ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶಮ್ಯಾ ಡಿ. ಹಿಂದುಸ್ತಾನಿ ಬಾನ್ಸುರಿ ಕೊಳಲು ವಾದನ ಪ್ರಸ್ತುಪಡಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಸ್ವಾಗತಿಸಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಂಮನೆ ವಂದಿಸಿದರು.ಪತ್ರಕರ್ತರಾದ ಶಿವಪ್ರಸಾದ್ ಆಲೆಟ್ಟಿ ಪ್ರಾರ್ಥಿಸಿ, ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.















