ಸುಳ್ಯ: 75 ವಯಸ್ಸು ಪೂರ್ತಿಗೊಳಿಸಿದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಹಾಗೂ 60 ವಯಸ್ಸು ಪೂರ್ತಿ ಮಾಡಿದ ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೇಟ್ಟಿ ಅವರನ್ನು ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಸುಳ್ಯ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ
ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಹಾಗೂ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಎಂ.ಬಿ.ಸದಾಶಿವ ಅವರು ಸನ್ಮಾನ ನೆರವೇರಿಸಿದರು.
ಚಿತ್ರಾ ಮಟ್ಟಿ, ಕುಸುಮಾವತಿ ಕುಕ್ಕೇಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದಲೂ ಗಂಗಾಧರ ಮಟ್ಟಿ ಹಾಗೂ ಜಯಪ್ರಕಾಶ್ ಕುಕ್ಕೇಟ್ಟಿ ಅವರನ್ನು ಸನ್ಮಾನಿಸಲಾಯಿತು. ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾಗಿ ಜವಾಬ್ದಾರಿ ವಹಿಸಿಕೊಂಡ ಹರೀಶ್ ಬಂಟ್ವಾಳ್ ಅವರನ್ನು ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ತಾ.ಪಂ ಇಒ ಅವರು ಪತ್ರಕರ್ತರಿಗೆ ಸಂವಿಧಾನದ ಓದು ಪುಸ್ತಕವನ್ನು ವಿತರಿಸಿದರು.

ಪ್ರೆಸ್ ಕ್ಲಬ್ ಕೋಶಾಧಿಕಾರಿ ರಮೇಶ್ ನೀರಬಿದಿರೆ ಸ್ವಾಗತಿಸಿದರು, ನಿರ್ದೆಶಕಕ ಗಂಗಾಧರ ಕಲ್ಲಪಳ್ಳಿ ಸನ್ಮಾನಿತರ ಪರಿಚಯ ಮಾಡಿದರು. ದುರ್ಗಾಕುಮಾರ್ ನಾಯರ್ಕೆರೆ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







