ಮಂಗಂಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲೆಗಳು, ಕಾಲೇಜುಗಳು, ವಿವಿಧ ಸಂಸ್ಥೆಗಳು ಮತ್ತು
ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳು) ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಡಿಪಿಎಆರ್ನ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಇ-ಗ್ಯಾಜೆಟ್ಗಳು ನಿಷೇಧ:ಜಿಲ್ಲಾಧಿಕಾರಿ
ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ.10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ.13ರಂದು ಸುರತ್ಕಲ್ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.