ಸುಳ್ಯ: ಸುಳ್ಯ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಿಂದ ಮತ್ತು ಸುಳ್ಯ ತಾಲೂಕು ಮಹಿಳಾ ಸಮಾಜದ ವತಿಯಿಂದ ಎಂ.ಬಿ.ಸದಾಶಿವ ಮತ್ತು ಹರಿಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಲೆಯ ಶಿಕ್ಷಕಿಯರನ್ನು ಹಾಗೂ ಸಿಬ್ಬಂದಿ ವರ್ಗದವರನ್ನು
ಎಂ.ಬಿ.ಫೌಂಡೇಷನ್ನ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸುಳ್ಯ ಚರ್ಚ್ನ ಧರ್ಮಗುರುಗಳಾದ ಫಾ.ವಿಕ್ಟರ್ ಡಿಸೋಜಾ, ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾಲೂಕು ಕ.ಸಾ.ಪ.ಅಧ್ಯಕ್ಷ ಚಂದ್ರಶೇಖರ ಪೇರಾಲು, ಎಂ.ಬಿ.ಫೌಂಡಷನ್ನ ಖಜಾಂಚಿ ಪುಷ್ಪಾ ರಾಧಾಕೃಷ್ಣ ಮಾಣಿಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಎಂ.ಬಿ.ಫೌಂಡೇಷನ್ನ ಅಧ್ಯಕ್ಷ ಎಂ.ಬಿ.ಸದಾಶಿವ ಸ್ವಾಗತಿಸಿದರು.ಶಾಲೆಯ ಮುಖ್ಯ ಶಿಕ್ಷಕಿ ಹರಿಣಿ ಸದಾಶಿವ ರವರು ವಂದಿಸಿದರು.