ಸುಳ್ಯ: ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ನೀಡಲು ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಧನ ಸಹಾಯ ನೀಡಿದೆ. ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಕಟ್ಟಲಾಗದೇ ಕಾಲೇಜು ಶಿಕ್ಷಣವನ್ನು ಅರ್ಧದಲ್ಲೇ
ಮೊಗಕುಗೊಳಿಸುವ ಸ್ಥಿತಿಯಲ್ಲಿದ್ದರು. ಇದನ್ನು ಅರಿತ ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಇಬ್ಬರು ವಿದ್ಯಾರ್ಥಿಗಳ ತಲಾ 3,500 ರೂಗಳಂತೆ 7000 ರೂಗಳನ್ನು ಕ್ಲಬ್ನ ಪದಾಧಿಕಾರಿಗಳು ಕಾಲೇಜಿನ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಅವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಕ್ಲಬ್ನ ಅಧ್ಯಕ್ಷ ಗಿರೀಶ್ ಅಡ್ಪಂಗಾಯ, ಕಾರ್ಯದರ್ಶಿ ಸಂತೋಷ್ ರೈ ಕಾನತ್ತಿಲ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರಂಜಿತ್ ಕುಮಾರ್, ಕಾರ್ಯದರ್ಶಿ ರವಿಕುಮಾರ್ ದೊಡ್ಡೇರಿ ಉಪಸ್ಥಿತರಿದ್ದರು.









