ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಶನ್ ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾದ ಎನ್ಐಟಿಕೆ ಸುರತ್ಕಲ್ನ ದೀಪಕ್ ಬಿ.ಸಿ ಅವರು ಪ್ರೊಡಕ್ಟ್ ಡಿಸೈನ್ & ಡೆವಲಪ್ಮೆಂಟ್ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ
ಸಿ.ಇ.ಒ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು.ನ ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ. ಉಜ್ವಲ್ ಯು.ಜೆ. ಗೌರವ ಅತಿಥಿ ನೆಲೆಯಲ್ಲಿ ಹೊಸ ತಂತ್ರಜ್ಞಾನಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವನ್ನು ಉಪಯೋಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ವಿಭಾಗ ಮುಖ್ಯಸ್ಥರಾದ ಪ್ರೊ. ರಾಘವೇಂದ್ರ ಬಿ. ಕಾಮತ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಪ್ರತೀಕ್ ಸಿ.ಎಸ್. ಮತ್ತು ಪುನೀತ್ ಪ್ರಾರ್ಥಿಸಿದರು, ಪೄಥ್ವಿರಾಜ್ ಅತಿಥಿಗಳನ್ನು ಪರಿಚಯಿಸಿದರು. ಮೈಪಾಲ್ ಸಿಂಗ್ ಸ್ವಾಗತಿಸಿ, ಶಿವಪ್ರಸಾದ್ ಧನ್ಯವಾದ ಸಮರ್ಪಿಸಿದರು. ಜೀವಿತ ಮತ್ತು ನಿಶಾ ಜೆ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ಸುನಿಲ್ ಕುಮಾರ್ ಎಂ., ಪ್ರೊ. ಅಭಿಜ್ಞ ಬಿ.ಬಿ. ಮತ್ತು ಪ್ರೊ. ಸುಧೀರ್ ಕೆ.ವಿ. ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.