ಮಂಗಳೂರು:ಹಿರಿಯ ಪತ್ರಕರ್ತ ಕೆ.ಆನಂದ ಶೆಟ್ಟಿ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ. ಮಂಗಳೂರಿನ ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ ಅವರಿಗೆ ಮಾಧ್ಯಮ ಅಕಾಡೆಮಿ ನೀಡುವ ಕೆ.ಯು.ಡಬ್ಲ್ಯು.ಜೆ ದತ್ತಿ ಪ್ರಶಸ್ತಿ ಲಭಿಸಿದೆ. ಆನಂದ ಶೆಟ್ಟಿಯವರು 38 ವರ್ಷಗಳ ಕಾಲ ಹೊಸದಿಗಂತ ಪತ್ರಿಕೆಯಲ್ಲಿ ವರದಿಗಾರರಾಗಿ, ಹಿರಿಯ ವರದಿಗಾರರಾಗಿ, ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. 32 ವರ್ಷಗಳ ಕಾಲ ಆಕಾಶವಾಣಿಯ ವರದಿಗಾರರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.












