ಜಾಲ್ಸೂರು:ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಸುಳ್ಯ, ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಅಡ್ಕಾರ್ ಇವರ ನೇತೃತ್ವದಲ್ಲಿ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ ಕೆ.ವಿ.ಜಿ. ದಂತ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು
ಆಸ್ಪತ್ರೆ, ಸುಳ್ಯ ಇವರ ಸಹಭಾಗಿತ್ವದೊಂದಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 98 ನೇ ಜಯಂತ್ಯುತ್ಸವದ ಸವಿನೆನಪಿಗಾಗಿ ಬೃಹತ್ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಅಡ್ಕಾರು ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ವಠಾರದಲ್ಲಿ ನ. 29 ರಂದು ನಡೆಯಿತು.ಶಿಬಿರವನ್ನು

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು.ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಸಂಶುದ್ದೀನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ನ. ಸೀತಾರಾಮ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಕೆ. ಟಿ. ವಿಶ್ವನಾಥ್, ಉಪಾಧ್ಯಕ್ಷ ಪ್ರೊ.ಕೆ.ವಿ.ದಾಮೋದರ ಗೌಡ, ಕಾರ್ಯದರ್ಶಿ ರಂಗನಾಥ್ ಪಿ.ಎಂ., ಕೋಶಾಧಿಕಾರಿ ಚಂದ್ರಶೇಖರ ನಂಜೆ, ಶಿಬಿರ ಸಂಚಾಲಕ ರಜತ್ ಅಡ್ಕಾರ್ ಉಪಸ್ಥಿತರಿದ್ದರು.ಸಮಾರಂಭದಲ್ಲಿ
ಹಿರಿಯ ವೈದ್ಯರಾದ ಡಾ. ಹರಿಪ್ರಸಾದ್ ಕುದ್ಕುಳಿ ಮತ್ತು ಡಾ. ಗೋಪಾಲಕೃಷ್ಣ ಭಟ್ ಅವರನ್ನು ಗೌರವಿಸಲಾಯಿತು.ಡಾ. ಲಕ್ಷ್ಮೀಶ್ ಕೆ. ಎಸ್ ಸ್ವಾಗತಿಸಿ,ಅಬೂಬಕ್ಕರ್ ಜೆ.ಎನ್. ಅಡ್ಕಾರು ವಂದಿಸಿದರು. ಶಿಕ್ಷಕ ಶಶಿಧರ್ ಕಾರ್ಯಕ್ರಮ ನಿರ್ವಹಿಸಿದರು.ವೈದ್ಯಕೀಯ ಶಿಬಿರದಲ್ಲಿ ವಿವಿಧ ವಿಭಾಗಗಳಲ್ಲಿ ತಪಾಸಣೆ, ಚಿಕಿತ್ಸೆ ನೀಡಲಾಯಿತು.

















