ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ, ಕೆ.ವಿ.ಜಿ. ಲಾ ಕಾಲೇಜು ಯೂತ್ ರೆಡ್ ಕ್ರಾಸ್ ವಿಂಗ್, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಕೆ.ವಿ.ಜಿ. ಮೆಡಿಕಲ್ ಕಾಲೇಜಿನ
ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೆ ನಟರಾಜನ್, ಪ್ರೊಫೆಸರ್ ಡಾ. ರಾಜೇಶ್, ಡಾ. ಜಗದೀಶ್, ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಡಾ. ಪ್ರಮೋದ್ ಪಿ.ಎ, ಕೆ.ವಿ.ಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ, ಸಮೂಹ ಸಂಸ್ಥೆಗಳ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಈ ಉಪಸ್ಥಿತರಿದ್ದರು. ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ. ನವ್ಯ ಬಿ.ಎನ್. ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.ಅಸಿಸ್ಟೆಂಟ್ ಪ್ರೊಫೆಸರ್ ಡಾ. ಅಂಜಲಿ ರಾವ್ ಕಾರ್ಯಕ್ರಮ ನಿರೂಪಿಸಿದರು. ಡಾ. ನಿಕ್ಷಯ್ ಪ್ರಾರ್ಥಸಿದರು. ಪೆಥಾಲಜಿ ವಿಭಾಗ ಮುಖ್ಯಸ್ಥೆ ಡಾ. ಸತ್ಯವತಿ ಆರ್ ಆಳ್ವ ಸ್ವಾಗತಿಸಿ, ಪೆಥಾಲಜಿ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ವಿನಿತಾ ಎ ವಂದಿಸಿದರು.