ಸುಳ್ಯ:ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಕ್ಷೇತ್ರಾಭಿವೃದ್ಧಿ ಅಧಿಕಾರಿ ಎಂ ಮೀನಾಕ್ಷಿ ಗೌಡರನ್ನು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ಮೀನಾಕ್ಷಿ ಗೌಡರನ್ನು ಸನ್ಮಾನಿಸಿದರು. ಸಿಎ ಗಣೇಶ್ ಭಟ್ ಅಭಿನಂದನಾ ಭಾಷಣ ಮಾಡಿದರು.ಕಸಾಪ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು.
ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ವರ್ತಕರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪವನ್ ಪಲ್ಲತಡ್ಕ, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ ವಿನೋದ್ ಲಸ್ರಾದೋ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂದನ್, ಸಂಧ್ಯಾರಶ್ಮಿ ಸಾಹಿತ್ಯ ಸಂಘದ ಅಧ್ಯಕ್ಷ ರಾಮಚಂದ್ರ ಪಲ್ಲತಡ್ಕ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿ, ಸುಳ್ಯ ಪಯಸ್ವಿನಿ ಜೇಸಿಸ್ ಅಧ್ಯಕ್ಷೆ ಲತಾ ಸುಪ್ರಿತ್ ಮೋಂಟಡ್ಕ, ಕಸಾಪ ಗೌರವ ಕೋಶಾಧಿಕಾರಿ ದಯಾನಂದ ಆಳ್ವ, ಕಸಾಪ ಪಂಜ ಹೋಬಳಿ ಘಟಕದ ಅಧ್ಯಕ್ಷ ಬಾಬುಗೌಡ ಅಚ್ರಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕಿ ಗಿರಿಜಾ ಎಂ.ವಿ. ಆಶಯಗೀತೆ ಹಾಡಿದರು. ಕಸಾಪ ಗೌರವ ಕಾರ್ಯದರ್ಶಿಗಳಾದ ಚಂದ್ರಮತಿ ಕೆ ಸ್ವಾಗತಿಸಿ ತೇಜಸ್ವಿ ಕಡಪಳ ವಂದಿಸಿದರು. ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮ ನಿರೂಪಿಸಿದರು. ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿರುವ ಚಂದ್ರಶೇಖರ ಪೇರಾಲು ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.








