ಸುಳ್ಯ: ಮುಸ್ಲಿಂ ಸಮುದಾಯದ ಮೀಸಲಾತಿ ಕಡಿತ ಪುನರ್ ಪರಿಶೀಲಿಸಿ, ಈ ಹಿಂದಿನoತೆಯೇ ಮುಂದುವರಿಸಲು ಆಗ್ರಹಿಸಿ
ರಾಜ್ಯಪಾಲರಿಗೆ, ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸುಳ್ಯ ತಹಶೀಲ್ದಾರ್ ಮೂಲಕ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ
ಮುಸ್ಲೀಂ ಸಮುದಾಯದ ಮೀಸಲಾತಿಯನ್ನು ಪುನರ್ ಪರಿಶೀಲನೆ ನಡೆಸಿ, ಈ ಹಿಂದೆ ಇದ್ದ ಮೀಸಲಾತಿ ಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಲು ಆಗ್ರಹಿಸಿ ಮನವಿ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ. ಶಹೀದ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದೀಕ್ ಕೋಕೋ, ಸುಳ್ಯ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ತಾಜುದ್ದೀನ್ ಆರಂತೋಡು ಉಪಸ್ಥಿತರಿದ್ದರು.