ಸುಳ್ಯ: ಇತಿಹಾಸ ಪ್ರಸಿದ್ದ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಮೇನಾಲ ದರ್ಗಾ ಪರಿಸರದಲ್ಲಿ ಬಿಗು ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ. ಎಸ್ಪಿ ರಿಷ್ಯಂತ್ ಸಿ ಬಿ ಅವರು ಜೂ.16ರಂದು ಮೇನಾಲ ಪರಿಸರಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿ
ಪೊಲೀಸ್ ಬಂದೋಬಸ್ಥಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಇಲ್ಲಿ ನಡೆಯುವ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ನಡೆಸಬೇಕಾದ ಬಂದೋಬಸ್ತ್ ಕುರಿತು ಸೂಚನೆ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಎಡಿಷನಲ್ ಎಸ್ ಪಿ ಎನ್.ಎಂ. ಧರ್ಮಪ್ಪ, ಪುತ್ತೂರು ವಿಭಾಗದ ಡಿವೈಎಸ್ಪಿ ಡಾ.ಪಿ ಗಾನಾ ಕುಮಾರ್, ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ಉಪಸ್ಥಿತರಿದ್ದರು. ಈ ಹಿಂದೆ ಇಲ್ಲಿ ಸ್ಥಳ ವಿವಾದಗಳು ಉಂಟಾದ ಹಿನ್ನಲೆಯಲ್ಲಿ ಸ್ಥಳದಲ್ಲಿ ಬಿಗು ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.