ಮೇನಾಲ: 2024 ಮಾರ್ಚ್ನಲ್ಲಿ ಅಜ್ಜಾವರ ಗ್ರಾಮದ ಮೇನಾಲದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಸಿದ್ಧತೆಗಳು ಆರಂಭಗೊಂಡಿದೆ. ಸಿದ್ಧತೆಯ ಹಿನ್ನಲೆಯಲ್ಲಿ ಮೇನಾಲ ಶ್ರೀ ವಯನಾಟ್ ಕುಲವನ್ ದೈವಸ್ಥಾನ ಹಾಗೂ ಪರಿಸರದಲ್ಲಿ ಊರಿನ ಭಕ್ತರಿಂದ ಶ್ರಮದಾನ ಸೇವೆ ನಡೆಯಿತು. ಹಲವು ಮಂದಿ ಭಕ್ತರು ಶ್ರಮ ಸೇವೆಯಲ್ಲಿ ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.