ಸುಳ್ಯ: ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ ಫೆಬ್ರವರಿ 2 ರಿಂದ 6ರ ತನಕ ಅಜ್ಜಾವರ ಮತ್ತು ಮೇನಾಲ ಮಖಾಂ ವಠಾರದಲ್ಲಿ ವಿಜ್ರಂಭಣೆಯಿಂದ ನಡೆಯಲಿದೆ.ಫೆ.2 ರಂದು ಉರೂಸ್ ಕಾರ್ಯಕ್ರಮ ಉದ್ಘಾಟನೆ ಗೊಳ್ಳಲಿದೆ.ಫೆ.3 ರಂದು ಕರ್ನಾಟಕ ರಾಜ್ಯ ವಿಧಾನ ಸಭಾಧ್ಯಕ್ಷರಾದ ಯುಟಿ ಖಾದರ್ ಹಾಗೂ ಅನೇಕ ಧಾರ್ಮಿಕ ,ರಾಜಕೀಯ ಮುಂಖಡರು ಬಾಗವಹಿಸಲಿದ್ದಾರೆ.ಇಂದು ಅಜ್ಜಾವರ
ಮುಹಿಯುದ್ದೀನ್ ಜುಮಾ ಮಸೀದಿ ಅಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ದಾರುಸ್ಸಲಾಂ ಬೆಳ್ತಂಗಡಿ ಅಧ್ಯಕ್ಷರಾದ ಸಯ್ಯಿದ್ ಝೈನುಲ್ ಅಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ ದುವಾಃ ನೇತೃತ್ವ ವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಜ್ಜಾವರ ಎಂಜೆಎಂ ಖತೀಬರಾದ ಅಬ್ದುಲ್ ಖಾದರ್ ಮುನವ್ವರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.3ರಂದು ಶನಿವಾರ ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ಅಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಿಯಾಝ್ ಫೈಝಿ ಎಮ್ಮೆಮಾಡು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಫೆ.4ರಂದು ಆದಿತ್ಯವಾರ ಮೇನಾಲ ದರ್ಗಾ ಶರೀಫ್ನಲ್ಲಿ ಮಗ್ರಿಬ್ ನಮಾಜು ಬಳಿಕ ಮಖಾಂ ಅಲಂಕಾರ ಮತ್ತು ದಿಕ್ರ್ ಹಲ್ಕಾ ನಡೆಯಲಿದೆ. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ದ.ಕ.ಜಿಲ್ಲಾ ಅಧ್ಯಕ್ಷ ಸಯ್ಯದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ಉದ್ಘಾಟಿಸಿ ನೇತೃತ್ವ ವಹಿಸಲಿದ್ದಾರೆ. ಅಬ್ದುಲ್ ರಝಾಕ್ ಅಬ್ರಾರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಫೆ.5 ರಂದು ಸೋಮವಾರ ಮೇನಾಲ ದರ್ಗಾ ಶರೀಫ್ ವಠಾರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಯ್ಯದ್ ಹಕೀಂ ತಂಙಳ್ ಅವರು ಗೌರವ ಉಪಸ್ಥಿತರಿರುವರು. ಮಾಹಿನ್ ಮನ್ನಾನಿ ವೆಂಬಾಯಂ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಫೆಬ್ರವರಿ 6ರಂದು ನಡೆಯುವ ಉರೂಸ್ ಸಮಾರೋಪ ಸಮಾರಂಭಕ್ಕೆ ಮುನ್ನ ಸೌಹಾರ್ದ ಸಂಗಮ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಊರಿನ ಸರ್ವಧರ್ಮೀಯರು ಭಾಗವಹಿಸಲಿದ್ದಾರೆ ಎಂದು ಅಜ್ಜಾವರ ಮೇನಾಲ ಜಮಾ ಅತ್ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.









