ಸುಳ್ಯ:ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನ.12ರಂದು ನಡೆಯಿತು. ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆ,ವಿದ್ಯುತ್ ಕಡಿತ, ಹೊಸ ಸಂಪರ್ಕ, ಮೆಸ್ಕಾಂ ಸ್ಪಂದನೆ, 110 ಕೆವಿ ಸಬ್ ಸ್ಟೇಷಬ್ ಕಾಮಗಾರಿ ಸೇರಿದಂತೆ ವಿವಿಧ
ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ನಡೆಯಿತು. ಗ್ರಾಹಕರು ಸಭೆಯಲ್ಲಿ ವಿವಿಧ ಸಮಸ್ಯೆ ಕುಂದುಕೊರತೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ಮೆಸ್ಕಾಂ

ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ, ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಸಚಿನ್ , ಮೆಸ್ಕಾಂ ಸುಳ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್,ಸುಬ್ರಹ್ಮಣ್ಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್ ಸಫಲ್ಯ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮಿದ್ ಕುತ್ತಮೊಟ್ಟೆ , ಸೂಡ ಅಧ್ಯಕ್ಷ ಕೆ ಎಂ ಮುಸ್ತಫ ಸೇರಿ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.












