ಸುಳ್ಯ:ಪ್ರತಿಯೊಬ್ಬರೂ ಅಕ್ಷರ ಜ್ಞಾನಿಗಳಾದಾಗ ಸಮಾಜದಲ್ಲಿ ಬಹು ದೊಡ್ಡ ಬದಲಾವಣೆ ಸಾಧ್ಯ ಎಂದು ಮಾಜಿ ಸಚಿವರಾದ ಬಿ.ರಮಾನಾಥ ರೈ ಹೇಳಿದ್ದಾರೆ. ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಬೆಳ್ಳಿ ಹಬ್ಬದ ನೆನಪಿಗೆ ಸಂಘದ ಸಹ ಸಂಸ್ಥೆ ಕೊಡಿಯಾಲಬೈಲ್ನ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಗೆ ಕೊಡುಗೆಯಾಗಿ ನೀಡಿದ 3 ಕೊಠಡಿಗಳ ಉದ್ಘಾಟನೆ ನೆರವೇರಿಸಿ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.ಸರಕಾರದ ಜೊತೆ
ಸಂಘ ಸಂಸ್ಥೆಗಳು ಶಿಕ್ಷಣಕ್ಕೆ, ಪ್ರೋತ್ಸಾಹ, ಶಿಕ್ಷಣ ಸಂಸ್ಥೆಗಳಿಗೆ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು. ಪ್ರತಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಶಿಕ್ಷಣಕ್ಕೆ ಸರಕಾರದಿಂದ 80-90 ಕೋಟಿ ನೇರವಾಗಿ ಬರುತ್ತದೆ. ಪಂಚಾಯತ್ ವಿಕೇಂದ್ರೀಕರಣಕ್ಕೆ ತಿದ್ದುಪಡಿ ತಂದಿರುವುದರಿಂದ ಇದು ಸಾಧ್ಯವಾಗಿದೆ. ಇದು ಸಮಗ್ರ ಅಭಿವೃದ್ಧಿಗೂ ಪೂರಕವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಮಾತನಾಡಿ ‘ಶಾಲೆಗೆ ನೂತನ ಕೊಠಡಿಗಳನ್ನು ನಿರ್ಮಿಸಿಕೊಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ವೆಂಕಟರಮಣ ಸೊಸೈಟಿ ದೊಡ್ಡ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.
ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ ಮಾತನಾಡಿ ‘ ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯು ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಮಾತನಾಡಿ ‘ ಗ್ರಾಮೀಣ ಭಾಗದಲ್ಲಿ ಆರಂಭವಾದ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಈಗ ರಾಜ್ಯದಾದ್ಯಂತ ವಿಸ್ತರಿಸಿದೆ. ವೆಂಕಟರಮಣ ಸೊಸೈಟಿ ಹಾಗೂ ಎಂಜಿಎಂ ಶಾಲೆಯ ಮೂಲಕ ಈ ಭಾಗದ ಆರ್ಥಿಕ ಕ್ಷೇತ್ರಕ್ಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಉಬರಡ್ಕ ಮಿತ್ತೂರು ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮ ಸೂಂತೋಡು, ಉಪಾಧ್ಯಕ್ಷೆ ಚಿತ್ರಾಕುಮಾರಿ ಪಾಲಡ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್ ಗಂಗಾಧರ, ಎಂ.ಜಿ.ಎಂ ಪ್ರೌಢ ಶಾಲೆಯ ಸಂಚಾಲಕ ದೊಡ್ಡಣ್ಣ ಬರೆಮೇಲು, ಹರಿಪ್ರಸಾದ್ ಪಾನತ್ತಿಲ, ವೆಂಕಟರಮಣ ಸೊಸೈಟಿಯ ನಿರ್ದೇಶಕರಾದ ಜಾಕೆ ಸದಾನಂದ, ಕೆ.ಸಿ.ನಾರಾಯಣ ಗೌಡ, ಕೆ.ಸಿ ಸದಾನಂದ, ದಾಮೋದರ ನಾರ್ಕೋಡು, ಹೇಮಚಂದ್ರ ಐ. ಕೆ, ನವೀನ್ ಕುಮಾರ್ ಜೆ.ವಿ, ಶೈಲೇಶ್ ಅಂಬೆಕಲ್ಲು, ಜಯಲಲಿತಾ ಕೆ.ಎಸ್, ಲತಾ ಎಸ್ ಮಾವಜಿ, ನಳಿನಿ ಸೂರಯ್ಯ, ವ್ಯವಸ್ಥಾಪಕರಾದ ಚಂದ್ರಶೇಖರ ಮೇರ್ಕಜೆ, ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ
ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ, ಉಪಾಧ್ಯಕ್ಷ ಮೋಹನ್ರಾಮ್ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಮತ್ತು ನಿರ್ದೇಶಕರುಗಳನ್ನು ಹಾಗೂ ಶಾಲೆಗೆ ಕೊಡುಗೆ ನೀಡಿದ ಡಾ.ಲೀಲಾಧರ ಡಿ.ವಿ, ಲತಾ ಕುದ್ಪಾಜೆ ಅವರನ್ನು ಎಂ.ಜಿ.ಎಂ.ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಸೊಸೈಟಿಯ ಉಪಾಧ್ಯಕ್ಷ ಮೋಹನ್ರಾಮ್ ಸುಳ್ಳಿ ಸ್ವಾಗತಿಸಿ, ನಿರ್ದೇಶಕರಾದ ದಿನೇಶ್ ಮಡಪ್ಪಾಡಿ ವಂದಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಕಾರ್ಯಕ್ರಮ

ನಿರೂಪಸಿದುರು.ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಶಾಶ್ವತ ಕೊಡುಗೆಗಳನ್ನು ನೀಡಬೇಕೆಂಬ ಉದ್ದೇಶದಿಂದ ಕೊಡಿಯಾಲಬೈಲ್ನ ಮಹಾತ್ಮ ಗಾಂಧಿ ಮಲ್ನಾಡ್ ಪ್ರೌಢಶಾಲೆಗೆ 3 ಕೊಠಡಿಗಳನ್ನು ಕೊಡುಗೆಯಾಗಿ ನೀಡಿದೆ.
