ಮುಂಬೈ: ಸತತ ಮೂರು ಸೋಲಿನ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ತನ್ನ ಮೊದಲ ಜಯ ದಾಖಲಿಸಿತು. ಇಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರು 29 ರನ್ಗಳ ಜಯ ಗಳಿಸಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತು.235 ರನ್ಗಳ ಗುರಿ ಬೆನ್ನತ್ತಿದ್ದ
ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.ಓಪನರ್ ಪೃಥ್ವಿ ಶಾ 40 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ ಸಹೀತ 66 ರನ್ ಸಿಡಿಸಿ ತಂಡಕ್ಕೆ ಉತ್ತಮ ಆರಂಭ ಕೊಟ್ಟರು. 3ನೇ ಕ್ರಮಾಂಕದಲ್ಲಿ ಅಭಿಷೇಕ್ ಪೊರೆಲ್ 41 ರನ್ಗಳ ಕೊಡುಗೆ ಕೊಟ್ಟರೆ, ಸ್ಪೋಟಕ ಬ್ಯಾಟಿಂಗ್ ನಡೆಸಿದ ಟ್ರಿಸ್ಟನ್ ಸ್ಟಬ್ಸ್ 25 ಎಸೆತಗಳಲ್ಲಿ 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿ ಸಹೀತ 71 ರನ್ ಸಿಡಿಸಿ ಔಟಾಗದೆ ಉಳಿದರು. ಮುಂಬೈ ಪರ ಜೆರಾಲ್ಡ್ ಕೋಯಿಟ್ಜಿ 4 ಹಾಗೂ ಜಸ್ಪೀತ್ ಬುಮ್ರಾ 2 ವಿಕೆಟ್ ಪಡೆದರು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಪರ ರೋಹಿತ್ ಶರ್ಮ ಹಾಗೂ ಇಶಾನ್ ಕಿಸನ್ ಬಿರುಸಿನ ಆರಂಭ ನೀಡಿದರು. ಈ ಮೊದಲ ವಿಕೆಟ್ಗೆ 7 ಓವರ್ಗಳಲ್ಲಿ 80 ರನ್ ಪೇರಿಸಿದರು. ರೋಹಿತ್ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 49, ಕಿಶನ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 42, ಹಾರ್ದಿಕ್ ಪಾಂಡ್ಯ 33 ಎಸೆತಗಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 39, ಟಿಮ್ ಡೇವಿಡ್ 21 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 45 ರನ್ ಬಾರಿಸಿದರು. ರೊಮಾರಿಯೋ ಶೆಫರ್ಡ್ ಕೇವಲ 10 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ನೆರವಿನಿಂದ ಅಜೇಯ 39 ರನ್ ಗಳಿಸಿಸರು. ಆನ್ರಿಚ್ ನೋರ್ಜೆ ಎಸೆದ ಕೊನೆಯ ಓವರ್ನಲ್ಲಿ 4 ಸಿಕ್ಸರ್ ಹಾಗೂ 2 ಬೌಂಡರಿ ಸಹೀತ 32 ರನ್ ಚಚ್ಚಿದ ಶೆಫರ್ಡ್ ಬೃಹತ್ ಮೊತ್ತ ಗಳಿಸಲು ನೆರವಾದರು.