ಮುಂಬೈ:ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ದ 59 ರನ್ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಪ್ಲೇ ಆಫ್ಗೆ ಲಗ್ಗೆಯಿಟ್ಟಿದೆ. ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್
ಸೂರ್ಯಕುಮಾರ್ ಯಾದವ್ ಸಮಯೋಚಿತ ಅರ್ಧಶತಕದ (73) ನೆರವಿನಿಂದ ನಿಗದಿತ 20 ಓವರ್ಗಳಲ್ಲಿ
ಐದು ವಿಕೆಟ್ ನಷ್ಟಕ್ಕೆ 180 ರನ್ಗಳ ಸವಾಲಿನ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಬೌಲರ್ಗಳ ಸಂಘಟಿತ ದಾಳಿಯ ಮುಂದೆ ನಲುಗಿ 18.2 ಓವರ್ಗಳಲ್ಲಿ 121 ರನ್ಗಳಿಗೆ ಆಲ್ ಔಟ್ ಆಯಿತು. ಮುಂಬೈ ಬೌಲರ್ಗಳ ಮುಂದೆ ದೊಡ್ಡ ಇನ್ನೀಂಗ್ಸ್ ಕಟ್ಟುವಲ್ಲಿ ಡೆಲ್ಲಿ ಬ್ಯಾಟರ್ಗಳು ವಿಫಲವಾದರು. ಸಮೀರ್ ರಿಸ್ವಿ 39 ರನ್ ಗಳಿಸಿದರೆ, ವಿಪ್ರಾಜ್ ನಿಗಂ 20 ರನ್ ಗಳಿಸಿದರು. ಮುಂಬೈ ಪರ ಜಸ್ಪ್ರೀತ್ ಬುಮ್ರಾ, ಮಿಚೆಲ್ ಸ್ಯಾಂಟ್ನೆರ್ ತಲಾ 3 ವಿಕೆಟ್ ಪಡೆದರು.ಮೊದಲು ಬ್ಯಾಟ್ ಮಾಡಿದ
ಮುಂಬೈ ಪರ ರಯಾನ್ ರಿಕೆಲ್ಟನ್ (25) ಹಾಗೂ ವಿಲ್ ಜಾಕ್ಸ್ (21) ತಿಲಕ್ ವರ್ಮಾ(27) ಉತ್ತಮ ಕೊಡುಗೆ ನೀಡಿದರು. ಕೊನೆಯ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್, ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಸವಾಲಿನ ಮೊತ್ತ ಪೇರಿಸಲು ನೆರವಾದರು. ಅವರಿಗೆ ನಮನ್ ಧೀರ್ (24) ಅವರಿಂದಲೂ ಉತ್ತಮ ಬೆಂಬಲ ದೊರಕಿತು.
ಸೂರ್ಯಕುಮಾರ್ 43 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 73 ರನ್ ಗಳಿಸಿ ಔಟಾಗದೆ ಉಳಿದರು. ನಮನ್ ಎಂಟು ಎಸೆತಗಳಲ್ಲಿ ತಲಾ ಎರಡು ಬೌಂಡರಿ ಹಾಗೂ ಸಿಕ್ಸರ್ಗಳಿಂದ 24 ರನ್ ಗಳಿಸಿ ಅಜೇಯರಾಗುಳಿದರು.
ಡೆಲ್ಲಿ ಪರ ಮುಕೇಶ್ ಕುಮಾರ್ ಎರಡು ಮತ್ತು ಕುಲದೀಪ್ ಯಾದವ್ ಒಂದು ವಿಕೆಟ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.