ಮುಂಬೈ: ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ನ 2ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ದಾಖಲಿಸಿದೆ. ದಾಖಲೆ ಮೊತ್ತ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 6 ವಿಕೆಟ್ಗಳ ರೋಚಕ ಜಯ ದಾಖಲಿಸಿ ಶುಭಾರಂಭ ಮಾಡಿದೆ. ಮೊದಲು ಬ್ಯಾಟ್ ಮಾಡಿದ
ಕೆಕೆಆರ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 220 ರನ್ಗಳ ಬೃಹತ್ ಮೊತ್ತ ಕಲೆ ಕಲೆಹಾಕಿದೆ.ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಆರಂಭಿಕರಾದ ರೋಹಿತ್ ಶರ್ಮ ಹಾಗೂ ರಯಾನ್ ರಿಕೆಲ್ಟನ್ ಅವರ ಸ್ಪೋಟಕ ಅರ್ಧ ಶತಕಗಳ ನೆರವಿನಿಂದ 19.1 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 221ರನ್ ಗಳಿಸಿ ಗೆಲುವಿನ ನಗೆ ಬೀರಿತು.
ರೋಹಿತ್ ಹಾಗೂ ರಿಕೆಲ್ಟನ್ ಮೊದಲ ವಿಕೆಟ್ಗೆ 11.5 ಓವರ್ಗಳಲ್ಲಿ 148 ರನ್ ಸೇರಿಸಿ ಭರ್ಜರಿ ಆರಂಭ ಒದಗಿಸಿದರು. ರೋಹಿತ್ ಶರ್ಮ 38 ಎಸೆತಗಳಲ್ಲಿ ತಲಾ 6 ಸಿಕ್ಸರ್ ಹಾಗೂ ಬೌಂಡರಿ ನೆರವಿನಿಂದ 78 ರನ್ ಗಳಿಸಿದರೆ ರಿಕೆಲ್ಟನ್ 43 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ 81 ರನ್ ಗಳಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ಪರ ತಂಡದ ನಾಯಕ ಅಜಿಂಕ್ಯಾ ರಹಾನೆ (69 ರನ್, 40ಎ, 4X3, 6X5) ಅಂಗ್ಕ್ರಿಷ್ ರಘುವಂಶಿ (51 ರನ್) ಹಾಗೂ ರಿಂಕು ಸಿಂಗ್ (ಅಜೇಯ 33) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಪೇರಿಸಿದರು.










