ಸುಳ್ಯ:ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ ಜನ್ಮದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 23 ಮತ್ತು 24 ಗಾಂಧೀನಗರ ಮುನವ್ವಿರುಲ್ ಇಸ್ಲಾಂ ಮದರಸದಲ್ಲಿ ನಡೆಯಲಿರುವ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆಗಳು, ಇಸ್ಲಾಮಿಕ್ ಸಾಂಸ್ಕೃತಿಕ ಕಾರ್ಯಕ್ರಮದ ಘೋಷಣಾ ಪತ್ರವನ್ನು ಗಾಂಧಿನಗರ ಕೇಂದ್ರ ಜುಮಾ ಮಸ್ಜಿದ್ ಅಧ್ಯಕ್ಷ ಕೆ. ಎಂ. ಮುಸ್ತಫ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ
ಅವರು ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫರವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಇಂದಿನ ಆಧುನಿಕ ಜಗತ್ತಿನಲ್ಲೂ ಪ್ರಸ್ತುತವೆನಿಸಿದ ಸಂದೇಶವನ್ನು ಜಗತ್ತಿನೆಲ್ಲೆಡೆ ಸಾರಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದರು
ವೇದಿಕೆಯಲ್ಲಿ ಜಮಾಅತ್ ಸಮಿತಿ ಉಪಾಧ್ಯಕ್ಷ ಹಾಜಿ ಕೆ. ಎಂ. ಮಹಮ್ಮದ್ ಕೆಎಂಎಸ್, ಪ್ರಧಾನಕಾರ್ಯದರ್ಶಿ ಹಾಜಿ ಇಸ್ಮಾಯಿಲ್, ಖಜಾಂಚಿ ಹಾಜಿ ಮುಹಿಯದ್ದೀನ್ ಫ್ಯಾನ್ಸಿ, ಮದರಸ ಉಸ್ತುವಾರಿಗಳಾದ ಹಮೀದ್ ಬೀಜಕೊಚ್ಚಿ, ಅಬ್ದುಲ್ ಮಜೀದ್ ಕೆ. ಬಿ.
ನಿರ್ದೇಶಕರಾದ ಇಬ್ರಾಹಿಂ ಜಿ. ಎಂ, ಉಪಸ್ಥಿತರಿದ್ದರು
ಮದರಸ ಸದರ್ ಉಸ್ತಾದ್ ಇಬ್ರಾಹಿಂ ಸಖಾಫಿ ಪುಂಡೂರ್ ಸಭೆ ಉದ್ಘಾಟಿಸಿದರು, ಮದರಸ ಶಿಕ್ಷಕರುಗಳಾದ ಅಬ್ದುಲ್ ಖಾದರ್ ಮುಸ್ಲಿಯಾರ್ ಸ್ವಾಗತಿಸಿ, ಲತೀಫ್ ಸಖಾಫಿ ಗೂನಡ್ಕ ವಂದಿಸಿದರು. ಮಿಲಾದ್ ಫೆಸ್ಟ್ ಅಂಗವಾಗಿ 3 ವೇದಿಕೆಯಲ್ಲಿ 125 ಸ್ಪರ್ಧೆಗಳು ನಡೆಯಲಿದ್ದು 600 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ.