ಪುತ್ತೂರು: ಜಿಲ್ಲಾ ಇಲಾಖೆಗಳನ್ನು ಪುತ್ತೂರಿನಲ್ಲಿ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಪುತ್ತೂರು ಕೇಂದ್ರೀಕೃತವಾಗಿ ಜಿಲ್ಲಾಮಟ್ಟದ ಇಲಾಖಾ ಸಭೆಗಳು ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಅವರು ಪುತ್ತೂರು ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಂದಾಯ ಇಲಾಖೆಗೆ
ಸಂಬಂಧಿಸಿದಂತೆ ಅನೇಕ ದೂರುಗಳು ಬಂದಿದೆ, ಪ್ಲಾಟಿಂಗ್, ಕನ್ವರ್ಶನ್ , ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಇಲ್ಲಿನ ಶಾಸಕರು ಹಾಗೂ ಸಾರ್ವಜನಿಕರು , ಪಕ್ಷದ ಮುಖಂಡರು, ಕಾರ್ಯಕರ್ತರು ನನ್ನ ಗಮನಕ್ಕೆ ತಂದಿದ್ದಾರೆ. ಪ್ಲಾಟಿಂಗ್ ಸಮಸ್ಯೆ ಗಂಭೀರವಾಗಿಯೇ ಇದೆ. ಈ ಬಗ್ಗೆ ಕಂದಾಯ ಸಚಿವರ ಜೊತೆ ಶೀಘ್ರವೇ ಚರ್ಚೆ ಮಾಡುತ್ತೇನೆ. ಸಚಿವರ ಚರ್ಚೆಯ ಬಳಿಕ ಜಿಲ್ಲಾ ಮಟ್ಟದ ಕಂದಾಯ ಇಲಾಖಾ ಸಭೆಯು ಪುತ್ತೂರಿನಲ್ಲಿಯೇ ನಡೆಸುತ್ತೇನೆ. ಎಲ್ಲಾ ತಾಲೂಕುಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ಹೇಳಿದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಪ್ಲಾಟಿಂಗ್ ಇಲ್ಲಿನ ಬಹುದೊಡ್ಡ ಸಮಸ್ಯೆಯಾಗಿದೆ. ಪ್ಲಾಟಿಂಗ್ ಸಮಸ್ಯೆಯಿಂದಾಗಿ ಅನೇಕ ಮನೆಗಳಿಗೆ ಇನ್ನೂ ಡೋರ್ ನಂಬರ್ ಸಿಕ್ಕಿಲ್ಲ, ಕೆಲವು ಮನೆಗಳ ಕೆಲಸಗಳು ಅರ್ಧದಲ್ಲೇ ಬಾಕಿ ಇದೆ ಇದರ ಪರಿಹಾರಕ್ಕೆ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಸ್ವಾಗತಿಸಿದರು. ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, 2023 ರ ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾಂಗ್ರೆಸ್ ಮುಖಂಡ ಡಾ. ರಘು ಬೆಳ್ಳಿಪ್ಪಾಡಿ, ಸುಳ್ಯ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ,
ಜಿಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಅನಿತಾ ಹೇಮನಾಥ ಶೆಟ್ಟಿ, ನಿರ್ಮಲ್ಕುಮಾರ್ ಜೈನ್, ಮುರಳೀದರ್ ರೈ ಮಠಂತಬೆಟ್ಟು, ಈಶ್ವರಭಟ್ ಪಂಜಿಗುಡ್ಡೆ, ವಿಜಯಕುಮಾರ್ ಸೊರಕೆ, ಮೊದಲಾದವರು ಉಪಸ್ಥಿತರಿದ್ದರು