ಕಡಬ:ಆನೆ ದಾಳಿಯಂದ ಮತಪಟ್ಟ ರೆಂಜಲಾಡಿ ಗ್ರಾಮದ ನೈಲ ರಂಜಿತಾ ಹಾಗೂ ರಮೇಶ್ ರೈ ಅವರ ಮನೆಗೆ ಬಂದರು ಮೀನುಗರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಸೋಮವಾರ ಸಂಜೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಪತ್ರಕರ್ತರೊಂದಿಗೆ ಮತನಾಡಿದ ಸಚಿವರು
ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಆನೆಗಳ ಉಪಟಳ ಇದೆ, ಅದರಲ್ಲೂ ಕಡಬ ಭಾಗದಲ್ಲಿ ಹೆಚ್ಚಿದೆ. ಇಲ್ಲಿರುವ ಕಾಡಾನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಸರಕಾರದ ಗಮನಕ್ಕೆ ತಂದಿದ್ದೇನೆ. ತಕ್ಷಣ ಅಧಿಕಾರಿಗಳು ಕಾರ್ಯಪವತ್ತರಾಗಲಿದ್ದಾರೆ. ಮೃತರ ಕುಟುಂಬಕ್ಕೆ ತಲಾ 15 ಲಕ್ಷ ರೂ ಪರಿಹಾರ ನೀಡಲಾಗುವುದ. ತಕ್ಷಣಕ್ಕೆ ಐದು ಲಕ್ಷ ರೂ ನೀಡಲಾಗುವುದು ಎಂದರು. ಸಚಿವರೊಂದಿಗೆ ಬಿಜೆಪಿ ಮುಖಂಡರಾದ ಕಷ್ಣ ಶೆಟ್ಟಿ ಕಡಬ, ರಾಕೇಶ್ ರೈ ಕೆಡೆಂಜಿ, ಪುಲಸ್ತ್ಯಾ ರೈ, ಸುರೇಶ್ ಗೌಡ ದೇಂತಾರು, ಉಮೇಶ್ ಶೆಟ್ಟಿ ಸಾಯಿರಾಂ, ಅಜಿತ್ ಆರ್ತಿಲ ಮತ್ತಿತರರು ಉಪಸ್ಥಿತರಿದ್ದರು.