ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಕೃಷಿ ಸಚಿವಎನ್.ಚೆಲುವರಾಯ ಸ್ವಾಮಿ ಭೇಟಿ ನೀಡಿದರು. ಇವರೊಂದಿಗೆ ಅವರ ಪತ್ನಿ ಧನಲಕ್ಷ್ಮಿ ಆಗಮಿಸಿದ್ದರು. ಆರಂಭದಲ್ಲಿ ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಮಾಡಿದರು.ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ಸಚಿವರಿಗೆ
ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.ಬಳಿಕ ಸಚಿವರು ಹೊಸಳಿಗಮ್ಮನ ದರುಶನ ಮಾಡಿದರು.ಅರ್ಚಕ ನಾರಾಯಣ ಭಟ್ ನೂಚಿಲ ಕುಂಕುಮಾರ್ಚನೆ ನೆರವೇರಿಸಿ ಪ್ರಸಾದ ನೀಡಿದರು. ಬಳಿಕ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ ಸಚಿವರಿಗೆ ಶಾಲು ಹೊದಿಸಿ ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.ಈ ಸಂದರ್ಭ ದೇವಳದ ಎಇಒ ರಾಜಣ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ನಿಕಟಪೂರ್ವ ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾಂಗ್ರೆಸ್ ಯುವ ಮುಖಂಡರಾದ ಶೇಷಕುಮಾರ್ ಶೆಟ್ಟಿ, ಮನೋಜ್ ಕೈಕಂಬ, ಶ್ರೀ ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್, ಹರೀಶ್, ನವೀನ್ ಬಟ್ರುಪ್ಪಾಡಿ ಉಪಸ್ಥಿತರಿದ್ದರು.











