ಮಂಗಳೂರು: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ
ಪಾಲ್ಗೊಂಡು ಅದೇ ದಿನ ರಾತ್ರಿ ಬೆಂಗಳೂರಿಗೆ ಮರಳಲಿದ್ದಾರೆ.
ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 12:30ಕ್ಕೆ ಬಿಜೈಯಲ್ಲಿರುವ ಸರಕಾರಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಪರಾಹ್ನ 3ಕ್ಕೆ ದ.ಕ.ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿಪರಿಶೀಲನೆ ಮಾಡುವರು. ರಾತ್ರಿ 9:50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.