ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ: ವಿಮಾನದ ಮೂಲಕ ಅವರು ಆ.11ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
ಆಗಮಿಸುವರು. ಮಧ್ಯಾಹ್ನ 12.30ಕ್ಕೆ ಪುತ್ತೂರಿನಲ್ಲಿ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವರು. ಮಧ್ಯಾಹ್ನ 2 ಗಂಟೆಗೆ ಪುತ್ತೂರು ನಿರೀಕ್ಷಣಾ ಮಂದಿರಲ್ಲಿ ವಾಸ್ತವ್ಯ ಮಾಡಿ, ಮಧ್ಯಾಹ್ನ 3 ಗಂಟೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆ ತಪಾಸಣೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 6 ಗಂಟೆಗೆ ದರ್ಭೆಯಲ್ಲಿರುವ ಪುತ್ತೂರು ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ಮಾಡುವರು. ರಾತ್ರಿ 8.30ಕ್ಕೆ ಮಂಗಳೂರಿಗೆ ಆಗಮಿಸಿ, 9.50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.