ಮಂಗಳೂರು:ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಸಹಭಾಗಿತ್ವದಲ್ಲಿ ಸಹಕಾರದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ 50ನೆ ಉಚಿತ ವೈದ್ಯಕಿಯ
ತಪಾಸಣಾ ಶಿಬಿರ ಆರೋಗ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಭಯ ಮುಕ್ತ ವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಅಭಯಚಂದ್ರ ಜೈನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ,ಎ.ಜೆ. ಆಸ್ಪತ್ರೆಯ ವೈದ್ಯ ರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಮಾಧ್ಯಮ ಅಕಾಡೆಮಿಯ ಮಾಜಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಕಾರ್ಯಕ್ರಮ ಸಂಯೋಜಕ ಭಾಸ್ಕರ ರೈ ಕಟ್ಟ,ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಆನಂದ ಶೆಟ್ಟಿ,ಅನ್ನು ಮಂಗಳೂರು ಪದಾಧಿಕಾರಿಗಳಾದ ಹಿಲರಿ ಕ್ರಾಸ್ತಾ,ಆರಿಫ್ ಪಡುಬಿದ್ರಿ,ವಿಲ್ಫ್ರೆಡ್ ಡಿ ಸೋಜಾ, ರಾಜೇಶ್ ದಡ್ಡಂಗಡಿ,ಅಶೋಕ್ ಶೆಟ್ಟಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ, ಮೊದಲಾದವರು ಉಪಸ್ಥಿತರಿದ್ದರು.ಚೇತನ್ ಕಾರ್ಯಕ್ರಮ ನಿರೂಪಿಸಿದರು.