ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವ ಭಗವಂತ್ ಖೂಬ ಅವರು ಬುಧವಾರ ಭೇಟಿ ನೀಡಿದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಗುಳಿಗಮ್ಮನ ದರ್ಶನ

ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ವಿ.ಭಟ್, ಶೋಭಾ ಗಿರಿಧರ್, ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ, ಪ್ರಮುಖರಾದ ಎಸ್.ಎನ್.ಮನ್ಮಥ, ಶ್ರೀನಾಥ್ ಬಾಳಿಲ, ಸಂತೋಷ್ ಜಾಕೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









