ಮಂಗಳೂರು: ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.ಮಂಗಳೂರಿನ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಯಾಗಿ ಸಂಘಟಿಸಬೇಕು ಎಂದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು. ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.













