ಸುಳ್ಯ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗೃತಾ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರಂಭಗೊಂಡಿದೆ. ಮಳೆ ಹಾನಿ ಬಗ್ಗೆ, ಪ್ರಾಕೃತಿಕ ವಿಕೋಪ ಮುಂಜಾಗ್ರತ ಕ್ರಮ, ಪೂರ್ವಭಾವಿ ಸಿದ್ಧತೆ ಹಾಗೂ

ಮಾನ್ಸೂನ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಜಿಲ್ಲಾಧಿಕಾರಿ ದರ್ಶನ್.ಹೆಚ್.ವಿ, ಎಸ್ಪಿ ಡಾ.ಕೆ.ಅರುಣ್,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಹಾಗು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.












