ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ.
ವಿಧಾನ ಸೌಧದಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.