ಸುಬ್ರಹ್ಮಣ್ಯ: ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಮಾಸ್ಟರ್ ಪ್ಲಾನ್ ಸಭೆ ನಡೆಸಿದರು. ಸಭೆಯಲ್ಲಿ 3 ಹಂತದ ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ದೇವಸ್ಥಾನದ ಸುತ್ತು ಪೌಳಿ, ಪಾರಂಪರಿಕ ಶೈಲಿಯ ರಥಬೀದಿ, 5000 ಮಂದಿಗೆ ಏಕ ಕಾಲದಲ್ಲಿ
ಭೋಜನ ಪ್ರಸಾದ ವಿತರಿಸುವ ಕೊಠಡಿ, ವಸತಿ ಕಟ್ಟಡ, ಸಿಬ್ಬಂದಿಗಳ ವಸತಿ ಗ್ರಹ ಮತ್ತಿತರ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ಬಳಿಕ ಸಚಿವರು ಇಂಜಾಡಿ, ಆದಿ ಸುಬ್ರಹ್ಮಣ್ಯ, ಹೊಸ ಆಶ್ಲೇಷ ಮಂದಿರ ನಿರ್ಮಾಣವಾಘಲಿರುವ ಸ್ಥಳ, ಎಸ್ಎಸ್ಪಿಯು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಪಡೆದರು.
ಆದೇಶ ಪತ್ರ ಹಸ್ತಾಂತರ:
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಆದಿ ಸುಬ್ರಹ್ಮಣ್ಯ ರಸ್ತೆಯ ತುಳುಸಿತೋಟ ಎಂಬಲ್ಲಿ ದಾನಿಗಳಾದ ಮಾಜಿ ಸಚಿವ ಮಾಲೂರು ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರ ವತಿಯಿಂದ ನಿರ್ಮಾಣವಾಗಲಿರುವ ಆಶ್ಲೇಷ ಬಲಿ ಪೂಜಾ ಮಂದಿರದ ನಿರ್ಮಾಣ ಕಾಮಗಾರಿಗೆ ದಾನಿಗಳಿಗೆ ಸಚಿವ ರಾಮಲಿಂಗ ರೆಡ್ಡಿ ಆದೇಶ ಪತ್ರ ಹಸ್ತಾಂತರಿಸಿ ದಾನಿಗಳನ್ನು ಗೌರವಿಸಿದರು. ಆಶ್ಲೇಷ ಮಂದಿರಕ್ಕೆ ಆಶ್ಲೇಷ ಬಲಿ ಪೂಜಾ ಮಂದಿರಕ್ಕೆ

ಈ ಮೊದಲೇ ಶಂಕುಸ್ಥಾಪನೆ ನೆರವೇರಿಸಲಾಗಿದ್ದರಿಂದ, ಶಂಕುಸ್ಥಾಪನೆ ಕಾರ್ಯಕ್ರಮವನ್ನು ರದ್ದುಗೊಳಿಸಿ, ದಾನಿಗಳಿಗೆ ಆದೇಶ ಪತ್ರ ಹಸ್ತಾಂತರಿಸಿ, ದೇವರ ಪ್ರಸಾದ ನೀಡಿ ಗೌರವಿಸಲಾಯಿತು.
ಶಾಸಕಿ ಭಾಗೀರಥಿ ಮುರುಳ್ಯ, ಮುಜರಾಯಿ ಇಲಾಖೆ ಆಯುಕ್ತ ವೆಂಕಟೇಶ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ,ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಮಲ್ಲಿಕಾ ಪಕ್ಕಳ, ವಿವಿಧ ಇಲಾಖೆ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು ಉಪಸ್ಥಿತರಿದ್ದರು.